ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ನಮ್ಮ ಬಗ್ಗೆ

ಕರ್ನಾಟಕ ರಾಜ್ಯದಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು, ಸಾವು ನೋವುಗಳನ್ನು ನಿಯಂತ್ರಿಸಿ, ಅವುಗಳಿಂದುಂಟಾಗುವ ಸಾಮಾಜಿಕ ಮತ್ತು ಆರ್ಥಿಕ ಸುಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ನಿರಂತರವಾಗಿ ವಿವಿಧ ಆಯಾಮಗಳಲ್ಲಿ ಅಂದರೆ ವಾಹನ ಮತ್ತು ರಸ್ತೆ ಇಂಜಿನಿಯರಿಂಗ್‌, ಅಪರಾಧ ಉಲ್ಲಂಘನಾ ಪ್ರಕರಣಗಳ ವಿರುದ್ಧ ಪ್ರವರ್ತನ ಚಟುವಟಿಕೆಗಳು, ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮತ್ತು ಶಿಕ್ಷಣ, ರಸ್ತೆ ಅಪಘಾತಗಳು ಸಂಭವಿಸಿದ ಸಂದರ್ಭಗಳಲ್ಲಿ ತುರ್ತು ಚಿಕಿತ್ಸೆಯ ಲಭ್ಯತೆ & ನಿರ್ವಹಣೆ ಇತ್ಯಾದಿ ಆಯಾಮಗಳಲ್ಲಿ ವೈಜ್ಞಾನಿಕ ತಳಹದಿಯಲ್ಲಿ ವ್ಯವಸ್ಥಿತ ರೂಪದಲ್ಲಿ ಅನುಷ್ಠಾನಗೊಳಿಸಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ವ್ಯವಸ್ಥಿತ ರಚನೆಯನ್ನು ಹೊಂದುವ ಸಲುವಾಗಿ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಅಧಿನಿಯಮ, 2017 ಅನ್ನು ಅಧಿಸೂಚನೆ ಸಂಖ್ಯೆ:ಸಂವ್ಯಶಾಇ:35:ಶಾಸನ:2017, ಬೆಂಗಳೂರು, ರಲ್ಲಿ ದಿನಾಂಕ: 7ನೇ ಡಿಸೆಂಬರ್‌ 2017 ರಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಪ್ರಕಟಿಸಿ ಜಾರಿಗೊಳಿಸಲಾಗಿರುತ್ತದೆ.

ಸದರಿ ಅಧಿನಿಯಮದಡಿ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರವನ್ನು ಸ್ಥಾಪಿಸಲಾಗಿರುತ್ತದೆ. ಈ ಪ್ರಾಧಿಕಾರವು ರಾಜ್ಯದಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು, ಅವುಗಳಿಂದುಂಟಾಗುತ್ತಿರುವ ದುಷ್ಪರಿಣಾಮಗಳನ್ನು ನಿಯಂತ್ರಿಸಲು ಸಂಬಂಧಿಸಿದ ಪಾಲುದಾರಿಕೆ ಇಲಾಖೆಗಳಾದ ಪೊಲೀಸ್‌, ಸಾರಿಗೆ, ಶಿಕ್ಷಣ, ಆರೋಗ್ಯ, ಲೋಕೋಪಯೋಗಿ, ಪಂಚಾಯತ್‌ ರಾಜ್‌, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಇತರೆ ಪಾಲುದಾರಿಕೆ ಇಲಾಖೆಗಳೊಂದಿಗೆ ನಿರಂತರವಾಗಿ ಸಮನ್ವಯವನ್ನು ಸಾಧಿಸಿ ರಸ್ತೆ ಸುರಕ್ಷತಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ದೇಶದ ಹಾಗೂ ರಾಜ್ಯದ ಸಾಮಾಜಿಕ ಹಾಗೂ ಆರ್ಥಿಕ ಸುಭದ್ರತೆಯನ್ನು ಕಾಪಾಡುವ ಗುರುತರ ಜವಾಬ್ದಾರಿಯನ್ನು ಈ ಪ್ರಾಧಿಕಾರವು ಹೊಂದಿರುತ್ತದೆ.

ಇತ್ತೀಚಿನ ನವೀಕರಣ​ : 20-07-2021 02:03 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080